ಮಿಜೋರಾಂ: ಮಿಜೋರಾಂ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಐಜ್ವಾಲ್ ನಲ್ಲಿ 60 ಮೆಗಾವ್ಯಾಟ್ ಜಲವಿದ್ಯುತ್ ಘಟಕವನ್ನು ಉದ್ಘಾಟಿಸಿದರು. ಇದರ ಜತೆಗೆ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧ ಎಂದು ಭರವಸೆ ಕೂಡ ನೀಡಿದ್ದಾರೆ.