ವೆಂಗಾರಾ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಕೇರಳವನ್ನು ಕೆಣಕಬೇಡಿ ಎಂದು ಸಿಎಂ ಪಿಣರಾಯಿ ವಿಜಯನ್ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಒಂದು ತಿಂಗಳ ಬಿಜೆಪಿಯ ಜನ ರಕ್ಷ ಯಾತ್ರೆಯನ್ನು ಜನತೆ ಒಂದೇ ಧ್ವನಿಯಿಂದ ತಿರಸ್ಕರಿಸಿದ್ದಾರೆ ಎನ್ನುವುದಕ್ಕೆ ವೆಂಗಾರಾ ವಿಧಾನಸಭೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ ಕೇರಳದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದು, ಇದರಿಂದ ರಾಜ್ಯದ ಪ್ರವಾಸೋದ್ಯಮಕ್ಕೆ ಹಾನಿ ಮಾಡುವ ದುರುದ್ದೇಶಪೂರಿತ