ಗಾಂಧಿನಗರ : ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)’ ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ ಬಾರಿಗೆ ಗುಜರಾತ್ನ ಜುನಾಗಡ ಜಿಲ್ಲೆಯ ಕೇಶೋಡ್ ಮತ್ತು ಮುಂಬೈ ನಡುವೆ ನಾಗರಿಕ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ.ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ವಿಮಾನ ಯಾನಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮದೊಂದಿಗೆ ರಾಜ್ಯದ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಉದ್ದೇಶಿಸಿ ವಿಮಾನ ಸೇವೆ ಪ್ರಾರಂಭಿಸಲಾಗಿದೆ.ಈ ಸೌಲಭ್ಯವು ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸಲು ಸಹಕರಿಸುತ್ತದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ