ಕುಡಿದ ಮತ್ತಿನಲ್ಲಿ ಪುತ್ರಿಯರ ಜೀವ ತೆಗೆಯಲು ಹೊರಟ ತಂದೆ

ತೆಲಂಗಾಣ| Krishnaveni K| Last Modified ಭಾನುವಾರ, 8 ನವೆಂಬರ್ 2020 (10:08 IST)
ತೆಲಂಗಾಣ: ಕುಡಿದ ಮತ್ತಿನಲ್ಲಿ ಪಾಪಿ ತಂದೆ ತನ್ನಿಬ್ಬರು ಹೆಣ್ಣು ಮಕ್ಕಳ ಜೀವ ತೆಗೆಯಲು ಹೊರಟ ಘಟನೆ ತೆಲಂಗಾಣದಲ್ಲಿ ನಡೆದಿದೆ.

 
ಮಚ್ಚಿನಿಂದ 8 ವರ್ಷದ ಮತ್ತು 5 ವರ್ಷದ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಥಳೀಯರು ಮಕ್ಕಳನ್ನು ರಕ್ಷಿಸಿದ್ದು, ಪೊಲೀಸರಿಗೆ ಕರೆ ಮಾಡಿದ್ದಾರೆ. ಹೀಗಾಗಿ ಮಕ್ಕಳ ಜೀವ ಉಳಿದಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :