ಮುಂಬೈ : ಸಮೃದ್ಧಿ ಎಕ್ಸ್ಪ್ರೆಸ್ ವೇಯ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿಯ ಮೇಲೆ ಕ್ರೇನ್ ಕುಸಿದು ಬಿದ್ದಿದ್ದು, 16 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಬೈಲ್ ಗ್ಯಾಂಟ್ರಿ ಕ್ರೇನ್ ಅನ್ನು ಸೇತುವೆ ನಿರ್ಮಾಣದಲ್ಲಿ ಮತ್ತು ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್ಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ.ಮುಂಬೈನಿಂದ