ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ದಲಿತ ನಾಯಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಶೇ.25 ರಷ್ಟು ಮತದಾರರನ್ನು ಹೊಂದಿರುವ ದಲಿತರಿಗಾಗಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸುವ ಸಂದರ್ಭದಲ್ಲಿ ಮಾತನಾಡಿದ ಕೇಜ್ರಿವಾಲ್, ದಲಿತ ವ್ಯಕ್ತಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ