ಶ್ರೀನಗರ : ಟರ್ಕಿ ಮತ್ತು ಸಿರಿಯಾದಲ್ಲಿ ಭಾರೀ ಭೂಕಂಪ ಸಂಭವಿಸಿದ ಬೆನ್ನಲ್ಲೇ ಇದೀಗ ಭಾರತದಲ್ಲೂ ಅಲ್ಲಲ್ಲಿ ಭೂಕಂಪನ ವರದಿಯಾಗುತ್ತಿದೆ.ಶುಕ್ರವಾರ (ಫೆ.17) ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ.ಮುಂಜಾನೆ 5:10ರ ವೇಳೆಗೆ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಸಾಮಾನ್ಯ ಭೂಕಂಪನ ಉಂಟಾಗಿರುವುದರಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಸಂಭವಿಸಿಲ್ಲ. ಭೂಕಂಪನದ ಕೇಂದ್ರ ಬಿಂದು ಕತ್ರಾದಿಂದ ಪೂರ್ವಕ್ಕೆ 97 ಕಿಮೀ