ನವದೆಹಲಿ : ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ಸೋಮವಾರ ರಾತ್ರಿ ನಿಧನರಾದರು.ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ನಾವು ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಅಭಿಜಿತ್ ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್