ಕೋಲ್ಕತ್ತಾ : ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆಯಿಂದ 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ.ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿದೆ. ಭಾರೀ ಮೊತ್ತದ ಹಣವನ್ನು ಎಣಿಕೆ