ನವದೆಹಲಿ : ರಾಜ್ಯದ ಜಲ ವಿವಾದಗಳ ಬಗ್ಗೆ ಕಾನೂನು ತಂಡದ ವಕೀಲರ ಜೊತೆ ಚರ್ಚೆ ನಡೆಸಿದ್ದು ಸಾಧ್ಯವಾದಷ್ಟು ಬೇಗ ವಿವಾದಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ವಕೀಲರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು