ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಬಿಜೆಪಿ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿ ಯಾರಾಗಬೇಕು ಎನ್ನುವ ಚರ್ಚೆಗಳು ಶುರುವಾಗಿವೆ. ಈ ಬಗ್ಗೆ ಚರ್ಚೆ ನಡೆಸಲು ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.ಸೋನಿಯಾ ಗಾಂಧಿ, ಶರದ್ ಪವಾರ್, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಸೀತಾರಾಂ ಯೆಚೂರಿ ಸೇರಿದಂತೆ