ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆಯ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದಬಸ್ತ್ ಏರ್ಪಡಿಸಲಾಗಿದೆ. 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್ ಗಢದಲ್ಲಿ ಸರ್ಕಾರ ರಚನೆಗೆ ಬೇಕಾದ