ಕೋಲ್ಕತಾ : ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೂ.15ರಂದು ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ. ಈ ಸಂಬಂಧ ಪ್ರತಿಪಕ್ಷಗಳ ನಾಯಕರಿಗೆ ಪತ್ರ ಬರೆದಿರುವ ಅವರು, ದಿಲ್ಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.‘ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಎಲ್ಲ ಪ್ರಗತಿಪರ ವಿಪಕ್ಷ ನಾಯಕರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಕಾನ್ಸ್ಟಿಟ್ಯುಶನ್ ಕ್ಲಬ್ನಲ್ಲಿ ಜೂ. 15