ನವದೆಹಲಿ : ಇಂದು ತೆಲಂಗಾಣ ಹಾಗೂ ರಾಜಸ್ಥಾನ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ರಾಜಸ್ಥಾನದಲ್ಲಿ 200 ವಿಧಾನಸಭಾ ಕ್ಷೇತ್ರಗಳಿದ್ದು, 4 ಕೋಟಿ 75 ಲಕ್ಷ ಮತದಾರರಿದ್ದಾರೆ. ಹಾಗೇ 2,200 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶವಿದೆ. ಮತದಾನಕ್ಕಾಗಿ 51,687 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮಹಿಳೆಯರ ಮತದಾನಕ್ಕಾಗಿ ವಿಶೇಷ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ