ನವದೆಹಲಿ : ನಕ್ಸಲ್ ಸಮಸ್ಯೆಯನ್ನು ವರ್ಷದೊಳಗೆ ನಿರ್ಮೂಲನೆ ಮಾಡಲು ನಕ್ಸಲ್ ಬಾಧಿತ ರಾಜ್ಯಗಳ ಮುಖ್ಯಮಂತ್ರಿಗಳು ಒತ್ತು ನೀಡಬೇಕು. ಅಲ್ಲದೆ ನಕ್ಸಲರಿಗೆ ಸಿಗುತ್ತಿರುವ ಹಣಕಾಸಿನ ನೆರವಿನ ಮೂಲವನ್ನು ತಡೆಯಲು ಜಂಟಿ ಕಾರ್ಯತಂತ್ರ ರೂಪಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದರು. ನಕ್ಸಲ್ ಬಾಧಿತ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ಮಾವೋವಾದಿಗಳ ವಿರುದ್ಧದ ಹೋರಾಟವು ಈಗ ಅಂತಿಮ ಹಂತ ತಲುಪಿದೆ. ಹೀಗಾಗಿ ಅದನ್ನು