ಶ್ರೀಹರಿಕೋಟಾ : ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಹಾಗೂ ಸಂಶೋಧನಾ ಸಂಸ್ಥೆ (ಇಸ್ರೋ) ಭೂಮಿಯ ವೀಕ್ಷಣಾ ಉಪಗ್ರಹ EOS-02 ಅನ್ನು SSLV-D1 ಉಡಾವಣಾ ವಾಹಕ ಮೂಲಕ ಉಡಾಯಿಸಿದೆ.ಇಒಎಸ್-1 ಎರಡು ಉಪಗ್ರಹಗಳನ್ನು ಹೊತ್ತು ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ನಿಂದ ಇಂದು ಬೆಳಗ್ಗೆ 9:18ರ ಸುಮಾರಿಗೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.ಇದರ ಜೊತೆ ಭಾರತ 75ನೇ ಅಮೃತ ಮಹೋತ್ಸವ ಆಚರಿಸುತ್ತಿರುವ ನೆನಪಿನಾರ್ಥವಾಗಿ ಗ್ರಾಮೀಣ ಭಾಗದ