ನವದೆಹಲಿ: ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾದ ಹಿನ್ನೆಲೆಯಲ್ಲಿ ಖಾಸಗಿ ವಿದ್ಯುತ್ ಸರಬರಾಜು ಕಂಪೆನಿಗಳು ವಾರದೊಳಗಾಗಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಕಂಪೆನಿಗಳಿಗೆ ನೀಡಿರುವ ಲೈಸೆನ್ಸ್ ರದ್ದುಗೊಳಿಸಲು ಸರಕಾರ ಹಿಂಜರಿಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.