ನವದೆಹಲಿ : ಪಾಕಿಸ್ತಾನದ ಗಡಿಯಿಂದ ಭಾರತಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸ್ಫೋಟಕ ಮತ್ತು ಬಂದೂಕುಗಳನ್ನು ಭಾರತೀಯ ಸೇನೆಯ ಯೋಧರು ವಶಪಡಿಸಿಕೊಂಡಿದ್ದರು. ಈ ವೇಳೆ ಭಯೋತ್ಪಾದ ಕರ ಗುಂಪಿನಲ್ಲಿ ಮೊಹಮ್ಮದ್ ಕೂಡ ಕಾರ್ಯನಿರ್ವಹಿಸುತ್ತಿರುವ ವಿಷಯ ತಿಳಿದುಬಂದಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾಶ್ಮೀರದ ಕುಪ್ವಾರ ಮಾರ್ಗವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸಲಾಗುತ್ತಿತ್ತು. ಈ ಹಿಂದೆ ಭಾರತಿಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಬಳಿಕ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಸೇರಿದ್ದ ಭಯೋತ್ಪಾದಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.