ಚಂಡೀಗಢ : ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಎಲ್ಲಾ ಎಕ್ಸಿಟ್ ಪೋಲ್ ಗಳು ಹೇಳಿವೆ.ಆದರೆ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿಲ್ಲ. 2017ರಲ್ಲಿಯೂ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದು ಕೂಡ ಎಎಪಿ ಬರುತ್ತೆ ಎಂದು. ಆದರೆ ಗೆದ್ದಿದ್ದು ಮಾತ್ರ ಕಾಂಗ್ರೆಸ್ ಆಗಿತ್ತು. ಹೀಗಾಗಿ ಈ ಬಾರಿಯೂ ಅದೇ ಮ್ಯಾಜಿಕ್ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಆಪ್ಗೆ ಸ್ಪಷ್ಟ ಬಹುಮತ ಬರುತ್ತದೆ.