ಬೆಂಗಳೂರು : ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಪ್ರಚಾರ ಮಾಡುತ್ತಿದ್ದು, ಇದರಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅನುಕೂಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನ ಸಿಂಧಗಿ ಹಾಗೂ ಎರಡು ದಿನ ಹಾನಗಲ್ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಪಕ್ಷ ಅಪೇಕ್ಷೆ ಪಟ್ಟರೆ ಎರಡನೇ ಹಂತದ ಪ್ರಚಾರಕ್ಕೂ ಹೋಗುತ್ತೇನೆ. ಅಗತ್ಯ ಬಿದ್ದರೆ ಸಿಎಂ ಜೊತೆಗೂ ಪ್ರಚಾರ ಮಾಡುತ್ತೇನೆ.