ನವದೆಹಲಿ: ಕೇಂದ್ರ ಜವಳಿ ಖಾತೆ ಸಚಿವ ಸ್ಮೃತಿ ಇರಾನಿ ಚುನಾವಣೆ ಸಂದರ್ಭದಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ನೀಡಿದ್ದಾರೆ ಎನ್ನುವ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಇರಾನಿಗೆ ನೋಟಿಸ್ ನೀಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ದೆಹಲಿ ಹೈಕೋರ್ಟ್ ಮುಂದಿನ ತಿಂಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.