ಆರೋಪಿ ಉಪನ್ಯಾಸಕ ತನ್ನನ್ನು ವಿವಾಹವಾಗಲು ಒಪ್ಪಿಕೊಳ್ಳುವವರೆಗೂ ಧರಣಿಯನ್ನು ಮುಂದುವರಿಸುವುದಾಗಿ ಯುವತಿ ಬೆದರಿಕೆ ಒಡ್ಡಿದ್ದಾಳೆ.ವಿವಾಹವಾಗುವುದಾಗಿ ಸುಳ್ಳು ಭರವಸೆಗಳನ್ನು ನೀಡಿ ವಿವಿಧ ಸಂದರ್ಭಗಳಲ್ಲಿ ಪ್ರೊಫೆಸರ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮದುವೆಯ ಆಮಿಷ ಒಡ್ಡಿ ಉಪನ್ಯಾಸಕನೊಬ್ಬ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಆರೋಪ ಮಾಡಿದ್ದಾಳೆ. ವಿಶ್ವವಿದ್ಯಾನಿಲಯದ ಅಭಿವೃದ್ಧಿ ಯೋಜನೆಯಡಿಯಲ್ಲಿ ಭಾಷೆಯನ್ನು ಅಭ್ಯಸಿಸುತ್ತಿರುವ ವಿದ್ಯಾರ್ಥಿನಿ,