ಹೈದರಾಬಾದ್ : 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಸೀಲಿಂಗ್ ಫ್ಯಾನ್ ಕೆಳಗೆ ಬಿದ್ದು ವಿದ್ಯಾರ್ಥಿನಿ ಮುಖಕ್ಕೆ ಗಾಯವಾದ ಘಟನೆ ಆಂಧ್ರಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯ ಸ್ಥಳೀಯ ಶಾಲೆಯಲ್ಲಿ ನಡೆದಿದೆ.ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಪರೀಕ್ಷೆಗೆ ಎರಡು ದಿನದ ಮೊದಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದೆ.ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ