ನವದೆಹಲಿ : ಇಂದು ಐದನೇ ಹಂತದ ಚುನಾವಣೆಗೆ ದೇಶದ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ, ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಸೇರಿ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ.