ತಮಿಳುನಾಡಿನ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೇಂದ್ರ ಚುನಾವಣೆ ಆಯೋಗ ಸೂಚನೆ ನೀಡಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ವಿ.ಶಶಿಕಲಾ ಸಂಬಂಧಿಯಾಗಿರುವ ಟಿಟಿವಿ ದಿನಕರನ್ ವಿರುದ್ಧವೂ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ಆರ್.ಕೆ.ನಗರ್ ಉಪಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಸಿಎಂ ಪಳನಿಸ್ವಾಮಿ ಮತ್ತು ಶಶಿಕಲಾ ಸಂಬಂಧಿ ದಿನಕರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣೆ