ನವದೆಹಲಿ: ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಜನರು ಸಜೀವವಾಗಿ ದಹನವಾಗಿದ್ದಾರೆ. ಘಟನೆಯಲ್ಲಿ 70 ಜನರನ್ನು ರಕ್ಷಿಸಲಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ 10 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದಲ್ಲೇ ಇರುವ ಕಟ್ಟಡಕ್ಕೆ ಬೆಂಕಿ ಬಿದ್ದ ಬಗ್ಗೆ ಸಂಜೆ 4.30ರ ವೇಳೆಗೆ ಅಗ್ನಿಶಾಮಕ ಕಚೇರಿಗೆ ಕರೆ ಬಂದಿತ್ತು. ಕೂಡಲೇ