ಮುಂಬೈ: ಮುಂಬೈ ಮಹಾನಗರದ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ ಭಾರೀ ಬೆಂಕಿ ಅನಾಹುತ ಉಂಟಾದ ಹಿನ್ನೆಲೆ 12 ಮಂದಿ ಸುಟ್ಟು ಕರಕಲಾಗಿರುವ ಘಟನೆ ನಡೆದಿರುವುದಾಗಿ ಪೌರಾಡಳಿತಾಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಬೆಂಕಿ ಅನಾಹುತಕ್ಕೆ ಕಾರಣವೇನೆಂದು ತಿಳಿದಿಲ್ಲ. ಹಾಗೆಯೇ ಗಾಯಾಳುಗಳ ನಿಖರ ಸಂಖ್ಯೆ ಕೂಡ ಇನ್ನಷ್ಟೇ ತಿಳಿದು ಬರಬೇಕಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ