ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ತಯಾರಿಕಾ ಘಟಕದಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ದೇಗುಲದಲ್ಲಿರುವ ಲಡ್ಡು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಲಡ್ಡು ತಯಾರಿಸುವ ಸಂದರ್ಭದಲ್ಲಿ ಗ್ಯಾಸ್ ಒಲೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಕ್ರಮೇಣವಾಗಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ದಟ್ಟ ಹೊಗೆ ಆವರಿಸಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಭಕ್ತರಲ್ಲಿ ಆತಂಕಗೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಗುಲದ