ಲಕ್ನೋ : ಗುಡಿಸಿಲಿಗೆ ಬೆಂಕಿ ಬಿದ್ದ ಪರಿಣಾಮ ದಂಪತಿ ಹಾಗೂ ಅವರ ಮೂರು ಮಕ್ಕಳು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಹರಾಮೌನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮುಂಜಾನೆ ಅವಘಡ ನಡೆಯುವಾಗ ಎಲ್ಲರೂ ನಿದ್ರೆಗೆ ಜಾರಿದ್ದರು. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಸತೀಶ್ (27), ಆತನ ಪತ್ನಿ ಕಾಜಲ್ (24), ಮಕ್ಕಳಾದ