ಬೆಂಗಳೂರು:ಏರ್ ಒಡಿಶಾ ಸಂಸ್ಥೆ ಚೆನ್ನೈ- ಮೈಸೂರು ಮಾರ್ಗದಲ್ಲಿ ನಿತ್ಯ ವಿಮಾನ ಸೇವೆ ಕಲ್ಪಿಸಲು ಮುಂದಾಗಿದೆ.ಚೆನ್ನೈನಿಂದ ಹೊರಟ ವಿಮಾನ ಮೈಸೂರಿಗೆ ರಾತ್ರಿ 8.45ಕ್ಕೆ ಆಗಮಿಸಲಿದೆ. ಮತ್ತೆ ರಾತ್ರಿ 9ಕ್ಕೆ ಚೆನ್ನೈಗೆ ಪ್ರಯಾಣಿಸಲಿದೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಲ್ಲಿ ಈ ವಿಮಾನ ಹಾರಾಟ ಸೇವೆ ಆರಂಭವಾಗಲಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಏರ್ ಒಡಿಶಾ ಮತ್ತು ಮೇಘಾ ಏರ್ವೇಸ್ ಪ್ರೈವೇಟ್ ಲಿಮಿಟೆಡ್ ಜತೆ ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದೆ.