ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಸ್ಸಾಂನ 30ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಗ್ಗು ಪ್ರದೇಶಗಳ ಜನರು ಪ್ರವಾಹದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಸ್ಸಾಂನಲ್ಲಿ ಹಿಂದೆಂದೂ ಕಾಣದಂತಹ ಭಾರೀ ಮಳೆಯಿಂದಾಗಿ ನದಿಗಳು, ತೊರೆಗಳು ತುಂಬಿ ಹರಿಯುತ್ತಿವೆ.ಬ್ರಹ್ಮಪುತ್ರ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿದಿದ್ದು, ಅಲ್ಲಿನ ಪೊಲೀಸ್ ಠಾಣೆಯೊಂದು ನದಿಯಲ್ಲಿ ಕುಸಿದು ಬಿದ್ದಿದೆ. ಸುತ್ತಮುತ್ತಲಿನ ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ನಲ್ಬರಿ ಜಿಲ್ಲೆಯಲ್ಲಿ ನದಿಗೆ ಹೊಂದಿಕೊಂಡಂತೆ ಪೊಲೀಸ್ ಠಾಣೆಯ ಕಟ್ಟಡವಿದ್ದು, ಭಾರೀ