ಭ್ರಷ್ಟಾಚಾರವು ದೇಶದ್ರೋಹವಾಗಿದ್ದು, ಪಂಜಾಬ್ನ ಎಎಪಿ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ಸರ್ಕಾರ ಕೂಡ ಭ್ರಷ್ಟ ಸಚಿವರನ್ನು ಸಂಪುಟದಿಂದ ಹೊರಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರೊಬ್ಬರು ಒಂದು ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂಬುದನ್ನು ತಿಳಿದ ಭಗವಂತ್ ಮಾನ್ರವರು ಶೀಘ್ರವೇ ಅವರನ್ನು ವಜಾ ಮಾಡಿ, ತನಿಖೆಗೆ ಆದೇಶಿಸಿದ್ದಾರೆ. ಪ್ರತಿಪಕ್ಷಗಳು ಹಾಗೂ ಮಾಧ್ಯಮಗಳು ಕಳಂಕಿತ ಸಚಿವರ ರಾಜೀನಾಮೆಗೆ ಆಗ್ರಹಿಸುವ ಮುನ್ನವೇ