ನವದೆಹಲಿ|
pavithra|
Last Modified ಬುಧವಾರ, 18 ನವೆಂಬರ್ 2020 (06:16 IST)
ನವದೆಹಲಿ : ತನ್ನ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನಲೆಯಲ್ಲಿ 24 ವರ್ಷದ ಯುವಕ ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಆರೋಪಿ ಹಾಗೂ ಮೃತ ತಂದೆ ಆಗಾಗ ಜಗಳವಾಡುತ್ತಿದ್ದರು. ತಂದೆ ಯಾವಾಗಲೂ ಸೊಸೆಗೆ ಕಿರುಕುಳ ನೀಡುತ್ತಿದ್ದಲ್ಲದೇ ಅಶ್ಲೀಲ ಮಾತುಗಳನ್ನು ಆಡುತ್ತಿದ್ದ. ಇದರಿಂದ ಕೋಪಗೊಂಡ
ಮಗ ದುಪ್ಪಟ್ಟದಿಂದ ತಂದೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಗನನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.