ಬೆಂಗಳೂರು : ಪ್ರಸಕ್ತ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ತೀರ್ಮಾನಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.ಈಗಾಗಲೇ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021ರ ಮಸೂದೆಯನ್ನು ಸಿದ್ಧಪಡಿಸಿದೆ. ಸೋಮವಾರದ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆದು, ಬುಧವಾರ ವಿಧಾನಸಭೆಯಲ್ಲಿ ಮಸೂದೆ ಮಂಡಿಸಲು ಬೊಮ್ಮಾಯಿ ಸರ್ಕಾರ ಯೋಚಿಸಿದೆ.ಒತ್ತಾಯ, ಆಮಿಷವೊಡ್ಡಿ ನಡೆಸಲಾಗುವ ಮತಾಂತರಗಳನ್ನು ನಿಷೇಧಿಸುವ ಅಂಶ ಪ್ರಸ್ತಾವಿತ ಮಸೂದೆಯಲ್ಲಿದೆ. ಆದರೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ