ನವದೆಹಲಿ : ಕಳೆದ 5 ವರ್ಷಗಳಲ್ಲಿ ರಾಷ್ಟ್ರಾದ್ಯಂತ ಇರುವ ಸರ್ಕಾರೇತರ ಸಂಸ್ಥೆಗಳಿಗೆ ಒಟ್ಟು 88,882 ಕೋಟಿ ರೂ. ವಿದೇಶದಿಂದ ದೇಣಿಗೆ ಹರಿದು ಬಂದಿದೆ ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ. ಅದರಲ್ಲೂ ಕಳೆದ ವರ್ಷ ಅತಿ ಹೆಚ್ಚು ವಿದೇಶಿ ದೇಣಿಗೆಯನ್ನು ಪಡೆಯುವ ಎರಡನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. 2018 ರಿಂದ 2022ರ ನಡುವೆ ಈ ದೇಣಿಗೆ ಬಂದಿದ್ದು, ಈ ಸಮಯದಲ್ಲಿ ಎನ್ಜಿಓಗಳು ವಿದೇಶಿ ದೇಣಿಗೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ