Widgets Magazine

ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

ಆಂಧ್ರಪ್ರದೇಶ| pavithra| Last Modified ಬುಧವಾರ, 11 ಸೆಪ್ಟಂಬರ್ 2019 (10:58 IST)
: ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಟಿಡಿಪಿ ಮುಖಂಡ ನಾರಾ ಲೋಕೇಶ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಟಿಡಿಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ವೈಎಸ್‌ ಆರ್ ಕಾಂಗ್ರೆಸ್ ಪಕ್ಷದ ನೀಡುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಟಿಡಿಪಿ 'ಚಲೋ ಅತ್ಮಕೂರು' ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.


ಆದರೆ ಈ ಪ್ರತಿಭಟನೆಗೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಲೋಕೇಶ್ ಹಾಗೂಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :