ನವದೆಹಲಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ದೆಹಲಿ ಕಚೇರಿಯಲ್ಲಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಅರುಣ್ ಜೇಟ್ಲಿ, ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮಖದಲ್ಲಿ ಗೌತಮ್ ಗಂಭೀರ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿಯ ರಾಷ್ಟ್ರೀಯ ವಕ್ತಾರೆ, ಹಾಲಿ ಸಂಸದೆ ಮೀನಾಕ್ಷಿ ಲೇಖಿ ಅವರ ನವದೆಹಲಿ ಕ್ಷೇತ್ರವನ್ನು ಗೌತಮ್ ಗಂಭೀರ್ ಅವರಿಗೆ ಬಿಟ್ಟುಕೊಡಲು ಹೈಕಮಾಂಡ್