Widgets Magazine

ಮಾಜಿ ಪ್ರಧಾನಿ ವಾಜಪೇಯಿ ಜಯಂತಿ ಹಿನ್ನಲೆ; ಸಮಾಧಿಗೆ ಪುಷ್ಪನಮನ ಸಲ್ಲಿಸಿದ ರಾಜಕೀಯ ಗಣ್ಯರು

ನವದೆಹಲಿ| pavithra| Last Modified ಬುಧವಾರ, 25 ಡಿಸೆಂಬರ್ 2019 (10:41 IST)
ನವದೆಹಲಿ : ಇಂದು ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜಯಂತಿ ಹಿನ್ನಲೆ ವಾಜಪೇಯಿ ಸಮಾಧಿಗೆ ರಾಜಕೀಯ ಗಣ್ಯರು ಪುಷ್ಪನಮನ ಸಲ್ಲಿಸಿದ್ದಾರೆ.
ದೆಹಲಿಯ ಸದೈವ್ ಅಟಲ್ ಸ್ಮಾರಕದಲ್ಲಿರುವ ಸಮಾಧಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಹಾಗೂ ಕೇಂದ್ರ ಸಚಿವರು ಸೇರಿ ಹಲವು ಗಣ್ಯರು ವಾಜಪೇಯಿ ಸಮಾಧಿಗೆ ಪುಷ್ಪ ನಮನ ಸಲ್ಲಿದ್ದಾರೆ.


“ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಾಯಕತ್ವದಿಂದ ಸಾಕಷ್ಟು ಅಭಿವೃದ್ಧಿ ಕಂಡಿದೆ. ವಿಶ್ವಮಟ್ಟದಲ್ಲಿ ಭಾರತದ ಪ್ರತಿಷ್ಠಿತೆಯನ್ನು ಹೆಚ್ಚಿಸಿದ್ದಾರೆ. ಅವರು ನನ್ನ ಗುರುಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :