ವಿಶಾಖಪಟ್ಟಣ: ಅಮೆಝೋನ್ ಆನ್ ಲೈನ್ ಮಾರುಕಟ್ಟೆ ಮುಖಾಂತರ ಗಾಂಜಾ, ಮರಿಜ್ವಾನಾದಂತಹ ಅಮಲು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದವರನ್ನು ವಿಶಾಖಪಟ್ಟಣ ಪೊಲೀಸರು ಸೆರೆ ಹಿಡಿದಿದ್ದಾರೆ.ಈ ಆರೋಪಿಗಳು ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಅಮಲು ಪದಾರ್ಥಗಳನ್ನು ಆನ್ ಲೈನ್ ಮಾರುಕಟ್ಟೆಯ ಲಾಭ ಬಳಸಿ ಮಾರಾಟ ಮಾಡುತ್ತಿದ್ದರು.ಈ ಸಂಬಂಧ ನಾಲ್ವರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.