ಬುಡಕಟ್ಟು ಜನಾಂಗದ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಮನವಾರ್ ಪ್ರದೇಶದಲ್ಲಿ ವರದಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಆರೋಪಿ ಕರಣ್ ಬಾಲಕಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ದಾರುಣವಾಗಿ ಕೊಲೆ ಮಾಡಿದ್ದಾನೆ. ಬಾಲಕಿಯ ನೆರೆ ಮನೆಯಲ್ಲಿ ವಾಸವಿದ್ದ ಆರೋಪಯೇ ಕೃತ್ಯ ಎಸಗಿದ್ದು ಬಾಲಕಿಯ ಮೃತ ದೇಹ ಯಾರಿಗೂ ಗುರುತು ಸಿಗದೇ ಇರುವಂತೆ ಮಾಡಲು ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ.