ವಡೋದರ ನಗರದ ಫತೇಹ್ಪುರ ಪ್ರದೇಶದಲ್ಲಿ ರಾಮ ನವಮಿ ಉತ್ಸವದ ಅಂಗವಾಗಿ ಗುರುವಾರ ನಡೆಯುತ್ತಿದ್ದ ಶೋಭಾಯಾತ್ರೆ ಮೇಲೆ ಕಲ್ಲುತೂರಾಟ ನಡೆಸಿದ್ದ 24 ಮಂದಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ರಾಮ ನವಮಿ ಆಚರಣೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರನ್ನು ವಶಕ್ಕೆ ಪಡೆದಿದ್ದೇವೆ. ಎಫ್ಐಆರ್ ದಾಖಲಾದ ಬಳಿಕ ಎಲ್ಲರನ್ನೂ ಅಧಿಕೃತವಾಗಿ ಬಂಧಿಸಲಾಗುವುದು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ’ ಎಂದು