ನವದೆಹಲಿ : 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ವಿದ್ಯುತ್ ನಿರ್ವಹಣಾ ಸಿಬ್ಬಂದಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ.ಇದೀಗ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕೊಠಡಿಯ ಹೊರಗೆ ಕಾವಲು ಕಾಯುವ ಮೂಲಕ ಕೃತ್ಯಕ್ಕೆ ಸಹಕಾರ ನೀಡಿದ ಮತ್ತಿಬ್ಬರನ್ನು ಕೂಡ ಬಂಧಿಸಲಾಗಿದೆ. ಆರೋಪಿಗಳನ್ನು ಸತೀಶ್ ಕುಮಾರ್ (35), ವಿನೋದ್ ಕುಮಾರ್