ಜೈಪುರ್ : 11 ವರ್ಷದ ಬಾಲಕಿಯ ಮೇಲೆ ಆಕೆಯ ಇಬ್ಬರು ಸೋದರ ಸಂಬಂಧಿಗಳೇ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಇಬ್ಬರು ಸೋದರ ಸಂಬಂಧಿಗಳೂ ಅಪ್ರಾಪ್ತರಾಗಿದ್ದು 13 ಮತ್ತು 15 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉದಯಪುರದ ಅಂಬಾಮಾತಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯ ಎಸಗಿದ ಇಬ್ಬರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆವರೆಗೂ