ಚಂಡೀಗಢ : 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಚಂಡೀಗಢದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳಲ್ಲಿ ಓರ್ವ ಆಕೆಯ ಸಹಪಾಠಿಯಾಗಿದ್ದು, ಉಳಿದ ಮೂವರು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಅತ್ಯಾಚಾರಗೈದ ಅಪ್ರಾಪ್ತ ಆರೋಪಿಗಳು ಕಳೆದ 6 ತಿಂಗಳಿನಿಂದ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಘಟನೆ 15