ಗುವಾಹಟಿ : 16 ವರ್ಷದ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಪೊಲೀಸರು ಎನ್ಕೌಂಟರ್ ಮಾಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.ಗುವಾಹಟಿಯ ಹೊರವಲಯದಲ್ಲಿ ಅಪರಾಧ ಸ್ಥಳದ ಮಹಜರಿಗಾಗಿ ಬಂದಿದ್ದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡುಹಾರಿಸಿ ಆರೋಪಿಯನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.ಈ ಕುರಿತು ಮಾತನಾಡಿರುವ ಪೊಲೀಸರು, ಬಿಕಿಅಲಿ (20), ರಾಜೇಶ್ ಮುಂಡಾ (38) ಎಂಬ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ