ಚೆನ್ನೈ : ವೆಲ್ಲೂರಿನಲ್ಲಿ ಮಹಿಳಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.ಗುರುವಾರ ಬೆಳಗ್ಗೆ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ಆರಂಭದಲ್ಲಿ ಪೊಲೀಸರನ್ನು ಸಂಪರ್ಕಿಸಲಿಲ್ಲ. ಆದರೆ, ಕುಡಿದ ಅಮಲಿನಲ್ಲಿ ಜಗಳವಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ಅವರು ಅತ್ಯಾಚಾರ ನಡೆಸಿರುವುದು ಪೊಲೀಸರಿಗೆ ಗೊತ್ತಾಗಿದೆ.ದರೋಡೆ ಮಾಡಲು ಹೋಗಿದ್ದ ಆ ಪುರುಷರು ಅದಕ್ಕೂ ಮೊದಲು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದರು ಎಂದು