ಇತ್ತೀಚೆಗೆ ದೇಶದಲ್ಲಿ ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಕಾಮಪಿಶಾಚಿಗಳು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ. ಗಾಂಧೀಜಿ ರಾತ್ರಿ 12 ಗಂಟೆಗೆ ಮಹಿಳೆ ಒಬ್ಬಂಟಿಯಾಗಿ ಹೊರಬಂದ ದಿನ ಸ್ವಾತಂತ್ಯ ಸಿಗುತ್ತೆ ಅಂತ ಹೇಳಿದ್ದಾರೆ. ರಾತ್ರಿ ಇರಲಿ, ಹಗಲಿನಲ್ಲೂ ಕಾಮಪಿಶಾಚಿಗಳು ಸಿಕ್ಕ ಸಿಕ್ಕವರ ಮೇಲೆ ಎರಗಿ ಬೀಳುತ್ತಿದ್ದಾರೆ. ಜನನಿಬಿಡ ಪ್ರದೇಶಗಳಲ್ಲೇ ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್ ಎಂಬ