ಮುಂಬೈ : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿನ್ನೆ ಮಾಡಿದ ಒಂದು ಟ್ವೀಟ್ ಹಲವು ಗೊಂದಲಗಳಿಗೆ ಕಾರಣವಾಗಿತ್ತು.ಆ ಬಳಿಕ ಇದೀಗ ಈ ಬಗ್ಗೆ ಖುದ್ದು ಗಂಗೂಲಿ ನಾನು ಮಾರ್ಗದರ್ಶಕರ ರಾಯಭಾರಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ ಎಂದು ಟ್ವಿಟ್ ಮಾಡಿ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿದ್ದೇನೆ ಎಂದು ಗಂಗೂಲಿ ನಿನ್ನೆ ಮಾಡಿದ ಟ್ವೀಟ್ನಿಂದಾಗಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಗಂಗೂಲಿ ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ