ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಯೊಂದು ಹರಿದಾಡುತ್ತಿದೆ. ಇದಕ್ಕೆ ಕಾರಣ ಗಂಗೂಲಿಯ ಒಂದು ಟ್ವೀಟ್. ಆ ಬಳಿಕ ಇದೀಗ ಗಂಗೂಲಿ ರಾಜಕೀಯಕ್ಕೆ ಎಂಟ್ರಿಕೊಡುವುದು ಖಚಿತ ಎಂಬ ಮಾತು ಎಲ್ಲಡೆ ಕೇಳಿ ಬರುತ್ತಿದೆ. ಹೌದು ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ ಗಂಗೂಲಿ, 2019ರಲ್ಲಿ ತಮಗೆ ಒಲಿದು ಬಂದ ಬಿಸಿಸಿಐ ಅಧ್ಯಕ್ಷ ಪಟ್ಟವನ್ನು ಕೂಡ