ನವದೆಹಲಿ: ಅನಿಲ ಸೋರಿಕೆಯಿಂದಾಗಿ ದೆಹಲಿಯ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ತುಘ್ಲಕ್ ಬಾದ್ ನ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳು ಕಣ್ಣುರಿ ಮತ್ತು ಗಂಟಲು ಕಿರಿ ಕಿರಿಯಾಗುತ್ತಿದೆಯೆಂದು ದೂರಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಶಾಲೆಯ ಉಪ ಪ್ರಾಂಶುಪಾಲರು ಹೇಳಿದ್ದಾರೆ.ಗ್ಯಾಸ್ ಡಿಪೋದಲ್ಲಿ ಅನಿಲ ಸೋರಿಕೆಯಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಬೆಳಗ್ಗೆ 7.30 ರ ಸುಮಾರಿಗೆ